ಬೆಂಗಳೂರು: ಲೋ ಶುಗರ್ ನಿಂದ ಅಸ್ವಸ್ಥರಾದ ಸಚಿವ ಡಿ.ವಿ ಸದಾನಂದ ಗೌಡ ಅವರನ್ನ ಬೆಂಗಳೂರಿನ ಏರ್ಪೋರ್ಟ್ ರಸ್ತೆಯಯಲ್ಲಿರುವ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಮರ್ಜೆನ್ಸಿ ವಾರ್ಡ್ʼನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು, ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ವಸ್ಥರಾದರು. ಕೂಡಲೇ ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಸಚಿವರನ್ನ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದ್ದು, ನಗರದ ಅಸ್ಟರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಸಿದ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ, ತಂದೆಯ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಆಗತ್ಯವಿಲ್ಲ. ಫ್ಯಾಮಿಲಿ ಡಾಕ್ಟರ್ ಸಲಹೆಯ ಮೇರೆಗೆ ಆಸ್ಪತ್ರೆಗೆ ಕರೆತರಲಾಗಿದೆ ತಿಳಿಸಿದ್ದಾರೆ.