ಮೈಸೂರು: ನನಗೆ ಬಂದಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಆಗುತ್ತೆ. ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಿದೆ. ರಾಜ್ಯದಲ್ಲಿ ಈಗ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಕಳೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಯೋಗೇಶ್ವರ್ ದೊಡ್ಡ ಹಣ ತೆಗೆದುಕೊಂಡು ಹೋಗಿದ್ದಾರೆ ಎಂಬ ಎಚ್. ವಿಶ್ವನಾಥ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಅದು ವೈಟ್ ಮನಿನಾ ಅಥವಾ ಬ್ಲ್ಯಾಕ್ ಮನಿನಾ ಎಂಬುದರ ಬಗ್ಗೆ ತನಿಖೆಯಾಗಬೇಕು . ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಯಾರು ಕೊಟ್ಟಿರುವುದು ? ಯಡಿಯೂರಪ್ಪ ಅವರೇ ನೀಡಿರುವುದಾ ? 16 ಕ್ಷೇತ್ರಗಳಿಗೂ ಈ ಹಣ ಹಂಚಿರಬೇಕು ಅಲ್ಲವೇ ?ಈ ಬಗ್ಗೆ ಲೋಕಾಯುಕ್ತ ತನಿಖೆ ಆಗಬೇಕು ಎಂದು ಮೈಸೂರಲ್ಲಿ ಆಗ್ರಹಿಸಿದರು.



