ಬೆಂಗಳೂರು: ಸುಮಾರು ಒಂದು ವರ್ಷದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, ನಾಳೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ರಾಜರಾಜಕಾರಣ ಬಗ್ಗೆ ಚರ್ಚೆ ಮಾಡಲಿದ್ದಾರೆ.
ಕೊರೊನಾಕಾರಣದಿಂದ ಸಿದ್ದರಾಮಯ್ಯ ಅವರು ಕಳೆದ ಒಂದು ವರ್ಷದಿಂದ ದೆಹಲಿ ಪ್ರವಾಸ ಮುಂದೂಡುತ್ತ ಬಂದಿದ್ದರು. ರಾಹುಲ್‍ಗಾಂಧಿ ಭೇಟಿಗೆ ಅನೇಕ ಸಲ ಸಮಯ ಕೇಳಿದ್ದರಾದರೂ, ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ನಾಳೆ ಸಂಜೆ 4 ಗಂಟೆಗೆ ರಾಹುಲ್‍ಗಾಂಧಿ ಸಮಯ ನೀಡಿರುವುದರಿಂದ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ನಾಳೆ ಬೆಳಗ್ಗೆ 9.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ ಸಂಜೆ 4 ಗಂಟೆಗೆ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ರಾತ್ರಿ ದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.17ರಂದು ಮಧ್ಯಾಹ್ನ 2.10ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್‍ನ ಹಲವು ನಾಯಕರುಗಳನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ.



