ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿಪರ್ಸೆಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಕೆಪಿಸಿಸಿ ವೇದಿಕೆಯಲ್ಲಿಯೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಪರ್ಸೆಂಟೇಜ್ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಲೆಕ್ಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ಆರೋಪ ಮಾಡಿ, ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು.
ಪಕ್ಷದ ಅಧ್ಯಕ್ಷರ ವಿರುದ್ಧವೇ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತಲ್ಲದೇ ಆಡಳಿತ ಪಕ್ಷ ಬಿಜೆಪಿ ನಾಯಕರ ಟೀಕೆಗಳಿಗೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಭಯ ನಾಯಕರ ವಿರುದ್ಧ ಕ್ರಮ ಕೈಗೊಂಡಿದ್ದು, ಸಲೀಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆಗೊಳಿಸಿದ್ದರೆ, ವಿ.ಎಸ್. ಉಗ್ರಪ್ಪ ಅವರನ್ನು ಕಾಂಗ್ರೆಸ್ ನಿಂದಲೇ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ.ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ.
ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ.
ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ.
ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ "ಡಿಕೆಶಿ ಪದಚ್ಯುತಿ" ಎಂಬ ಮಾಸ್ಟರ್ ಪ್ಲ್ಯಾನ್ನ ಭಾಗವೇ?#ಭ್ರಷ್ಟಾಧ್ಯಕ್ಷ pic.twitter.com/DE3bKSgYmZ
— BJP Karnataka (@BJP4Karnataka) October 13, 2021