ಡಿವಿಜಿ ಸುದ್ದಿ, ಬೆಂಗಳೂರು: ಬೇರೆ ಪಕ್ಷದ 60 ಹಿರಿಯ ನಾಯಕರು ಕಾಂಗ್ರೆಸ್ ಸೇರಲು ಬಯಸಿ ಅರ್ಜಿ ಹಾಕಿದ್ದಾರೆ. ಅವರ ಅರ್ಜಿ ಪರಿಶೀಲಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದ ಅವರು, ಬೇರೆ ಪಕ್ಷಗಳಿಂದ 60ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸಿದ್ದಾರೆ. ಬಗ್ಗೆ ನಿರ್ಧರಿಸಲು ಈಗಾಗಲೇ ಒಂದು ಸಮಿತಿ ರಚಿಸಿದ್ದೇವೆ. ಈ ಸಮಿತಿಗೆ 60 ಅರ್ಜಿಗಳು ಸಲ್ಲಿಕೆ ಆಗಿವೆ. ರಮೇಶ್ ಬಾಬು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಸಮಯದಲ್ಲಿ 1,600 ಕೋಟಿಯ ಪ್ಯಾಕೇಜ್ ಘೋಷಿಸಿದ್ದರು. ಆ ಮೊತ್ತ ಯಾವ, ಯಾವ ಕ್ಷೇತ್ರಗಳಿಗೆ ತಲುಪಿದೆ ಎಂದು ಅಧಿವೇಶನದ ಆರಂಭದಲ್ಲಿಯೇ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.
ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಇವರನ್ನು ಕರೆದುಕೊಂಡು ಮುಖ್ಯಮಂತ್ರಿ ದೆಹಲಿಗೆ ಹೋಗಬೇಕಿತ್ತು. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಎಂದು ನಾವು ಸಾಕಷ್ಟು ಮನವಿ ಮಾಡಿದ್ದೇವೆ. ಆದರೆ, ಮುಖ್ಯಮಂತ್ರಿ ಸ್ಪಂದಿಸಿಲ್ಲ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದರು.



