ಡಿವಿಜಿ ಸುದ್ದಿ, ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ. ರವಿ ಆಯ್ಕೆಯಾಗಿದ್ದು, ಬಿಜೆಪಿಯ ಒಬ್ಬರಿಗೆ ಒಂದು ಹುದ್ದೆ ಪ್ರಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುಬೇಕಿತ್ತು. ಆದರೆ,ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ನಮ್ಮಲ್ಲಿ ಒಬ್ಬರಿಗೆ ಒಂದು ಸ್ಥಾನ ಎಂಬ ಅಲಿಖಿತ ನಿಯಮವಿದೆ. ಇದೇ ರೀತಿ 75 ವರ್ಷ ದಾಟಿದವರು ಅಧಿಕಾರ, ರಾಜಕೀಯದಿಂದ ನಿವೃತ್ತಿ ಹೊಂದಬೇಕೆಂಬ ನಿಯಮವೂ ಇದೆ. ಆದರೆ ಕೆಲವೊಮ್ಮೆ ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಪರೋಕ್ಷವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದರು.
ಅಲಿಖಿತ ನಿಯಮಗಳನ್ನು ಬದಲಾಯಿಸಿದ್ದು, ಪಕ್ಷದ ವರಿಷ್ಠ ಮಂಡಳಿಯ ನಿರ್ಧಾರ. ಆದರೆ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹಾಗೂ ವ್ಯಕ್ತಿಗತ ಆಯ್ಕೆಯಂತೆ ನನಗೆ ಸಂಘಟನೆಯೇ ಮುಖ್ಯ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದ್ದ ಸಿಟಿ ರವಿ ಅವರು, ಪಕ್ಷವೋ, ಸರ್ಕಾರವೋ ಎಂದು ಕೇಳಿದಾಗ ನಾನು ಪಕ್ಷಕ್ಕೆ ಪ್ರಾಮುಖ್ಯತೆ ನೀಡುತ್ತೇನೆ.
ರಾಷ್ಟ್ರೀಯ ರಾಜಕಾರಣಕ್ಕೆ ತೆರಳಿದರೂ ನಮ್ಮ ಬೇರುಗಳು ಇಲ್ಲೇ ಇದೆ. ಪಕ್ಷ ವರಿಷ್ಠರು ಯಾವಾಗ ರಾಜೀನಾಮೆಗೆ ಸೂಚಿಸುತ್ತಾರೋ ಅಂದೇ ರಾಜೀನಾಮೆ ನೀಡುತ್ತೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುಂದುವರಿಸುತ್ತೇನೆ ಎಂದರು. ಇನ್ನು ನಿನ್ನೆ ನಡೆದ ಸಂಪುಟಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋಷನ್ ಪಡೆದ ಸಚಿವ ಸಿಟಿ ರವಿ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ತಿಳಿಸಿದ್ದರು.



