ಭೋಪಾಲ್: ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹ್ವಾಣ್ ಸರ್ಕಾರದ ಅಳಿವು -ಉಳಿವಿನ ಉಪ ಚುನಾವಣೆ ಯಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 9 ಕ್ಷೇತ್ರಗಳ ಪೈಕಿ ಮುನ್ನಡೆ ಸಾಧಿಸಿದೆ.
ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ 18 ರಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಮಧ್ಯ ಪ್ರದೇಶದಲ್ಲಿ ಸರ್ಕಾರ ಉಳಿಸಿಕೊಳ್ಳಲು ಈ ಉಪ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ. ಮಧ್ಯ ಪ್ರದೇಶದ 229 ವಿಧಾನಸಭಾ ಕ್ಷೇತ್ರಗಳಲ್ಲಿ 115 ಮ್ಯಾಜಿಕ್ ನಂಬರ್ ಆಗಿದೆ. ಪ್ರಸ್ತುತ ಬಿಜೆಪಿ ಬಳಿ 107 ಶಾಸಕರ ಬೆಂಬಲವಿದ್ದು, ಬಹುಮತಕ್ಕೆ ಬಿಜೆಪಿಗೆ 08 ಸ್ಥಾನಗಳ ಅಗತ್ಯವಿತ್ತು. ಆದರೆ, ಬಿಜೆಪಿ 18 ಕ್ಷೇತರದಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ 87 ಶಾಸಕರನ್ನು ಹೊಂದಿದೆ.



