Connect with us

Dvgsuddi Kannada | online news portal | Kannada news online

ಅಶೋಕ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ ; ಡಿ.1ಕ್ಕೆ ಮತದಾನ

ಪ್ರಮುಖ ಸುದ್ದಿ

ಅಶೋಕ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ ; ಡಿ.1ಕ್ಕೆ ಮತದಾನ

ಡಿವಿಜಿ ಸುದ್ದಿ, ಬೆಂಗಳೂರು : ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ  ಇದಿನಿಂದ (ನವೆಂಬರ್11) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.   ಡಿಸೆಂಬರ್ 1 ರಂದು ಉಪಚುನಾವಣೆ ನಡೆಯಲಿ ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 19 ರಂದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ನವೆಂಬರ್ 23 ರವರೆಗೆ ಕಾಲಾವಕಾಶವಿದೆ.ಡಿಸೆಂಬರ್ 1 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ರವರಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ ಎಂದು ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top