ಡಿವಿಜಿ ಸುದ್ದಿ, ಬೆಂಗಳೂರು: ಆರ್ ಆರ್ ನಗರ ಉಪ ಚುನಾವಣೆಯನ್ನು ಮುಂದೂಡುವಂತೆ ಮುನಿರಾಜು ಗೌಡ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ.03 ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿದೆ.
ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು 25 ಸಾವಿರ ನಕಲಿ ಮತದಾನ ಮಾಡಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿಯಾಗದ್ದ ಮುನಿರಾಜು ಗೌಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಜಾಗೊಂಡಿದ್ದರಿಂದ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಬದಲಾದ ರಾಜಕಾರಣದಲ್ಲಿ ಮುನಿರತ್ನ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ, ಬಿಜೆಪಿಗೆ ಬಂದಿದ್ದರು.
ನ.03ರಂದು ಉಪ ಚುನಾವಣೆ ಘೋಷಣೆಯಾಗಿದ್ದರಿಂದ ಈ ಚುನಾವಣೆಯನ್ನು ಮುಂದೂಡುವಂತೆ ಮುನಿರಾಜು ಗೌಡ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಿಗದಿತ ದಿನಾಂಕದಂದೇ ಚುನಾವಣೆ ನಡೆಸುವಂತೆ ಆದೇಶ ನೀಡಿದೆ.