Connect with us

Dvgsuddi Kannada | online news portal | Kannada news online

ಲೋಕಸಭೆ, ರಾಜಸಭೆ ಟಿಕೆಟ್; ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶಾಮನೂರು ಪತ್ರ

ಪ್ರಮುಖ ಸುದ್ದಿ

ಲೋಕಸಭೆ, ರಾಜಸಭೆ ಟಿಕೆಟ್; ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶಾಮನೂರು ಪತ್ರ

ಬೆಂಗಳೂರು: ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವೀರಶೈವ-ಲಿಂಗಾಯತರು 1999ರವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವಿರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ- ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ.

ಇದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.

ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ‌ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top