ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿ-ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ ಗೆಲ್ಲಲಿದೆ. ಆದರೆ ಸಮೀಕ್ಷೆ ಸುಳ್ಳಾಗಲಿದ್ದು, ಶಿರಾ ಹಾಗೂ ರಾಜರಾಜೇಶ್ವರಿ ನಗರ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ. ನಾನು ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಸಂಚರಿಸಿ ಪ್ರಚಾರ ನಡೆಸಿದ್ದೇನೆ ಎಂದು ಅವರು ಹೇಳಿದರು.
ಕಳೆದ ನ. 3ರಂದು ತುಮಕೂರು ಜಿಲ್ಲೆ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮತದಾನ ನಡೆದಿತ್ತು. ಭಾರೀ ಕುತೂಹಲ ಕೆರಳಿಸಿರುವ ಉಪಕದನದ ಫಲಿತಾಂಶ ನ. 10ರಂದು ಹೊರಬೀಳಲಿದೆ.



