Connect with us

Dvgsuddi Kannada | online news portal | Kannada news online

ಕಾಗೆ ಕಟ್ಟಿದ ಗೂಡಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಸಿದ್ದರಾಮಯ್ಯಗೆ ಏಕೆ?: ಬಿಜೆಪಿ

ರಾಜಕೀಯ

ಕಾಗೆ ಕಟ್ಟಿದ ಗೂಡಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಸಿದ್ದರಾಮಯ್ಯಗೆ ಏಕೆ?: ಬಿಜೆಪಿ

ಡಿವಿಜಿ ಸುದ್ದಿ, ಬೆಂಗಳೂರು:  ಕಾಗೆ ಕಟ್ಟಿದ ಗೂಡಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಸಿದ್ದರಾಮಯ್ಯಗೆ ಏಕೆ ಎಂದು ಬಿಜೆಪಿ ಪ್ರಶ್ನಿಸಿದೆ.

ಮಾನ್ಯ ಸಿದ್ದರಾಮಯ್ಯನವರೇ, ದೇವೇಗೌಡರು ಬೆಳೆಸಿದ ಜೆಡಿಎಸ್‍ನಲ್ಲಿ ಸ್ಥಾನಮಾನ ಅನುಭವಿಸಿದಿರಿ. ಪರಮೇಶ್ವರ್ ಬೆಳೆಸಿದ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾದಿರಿ. ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಕನಸು ಕಾಣುತ್ತಿದ್ದೀರಿ. ಕಾಗೆ ಕಟ್ಟಿದ ಗೂಡಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ ಎಂದು ಬಿಜೆಪಿ ಸಿದ್ದರಾಮಯ್ಯ ಟ್ವೀಟ್ ಗೆ ಕಾಲು ಎಳೆದಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ. ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇಂದು ಆರ್.ಆರ್.ನಗರ ಕೈ ಅಭ್ಯರ್ಥಿ ಪರ ಪ್ರಚಾರ ವೇಳೆ  ಮಾಜಿ ಸಚಿವ ಜಮೀರ್ ಅಹ್ಮದ್, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನು ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗಲ್ಲ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದರು.

ಬೈ ಎಲೆಕ್ಷನ್ ಬಳಿಕ ರಾಜ್ಯ ರಾಜಕೀಯ ಬದಲಾವಣೆ ಆಗಿ ಮತ್ತೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಮತ್ತೆ ಸಿದ್ದರಾಮಯ್ಯ ನವರೆ ಸಿಎಂ ಆಗಬೇಕು. ಹೈ ಕಮಾಂಡ್ ಕೇಳಿದರೂ ನಾನು ಸಿದ್ದರಾಮಯ್ಯ ಸಿಎಂ ಆಗಬೇಕು ಅಂತ ಹೇಳ್ತೀನಿ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top