ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿಸಿರುವುದು ಖಂಡನೀಯ, ಇದೊಂದು ರಾಜಕೀಯ ಪ್ರೇರಿತ ಘಟನೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕಣದಲ್ಲಿ ವಿನಯ್ ಕುಲಕರ್ಣಿಗೆ ನೋಟಿಸ್ ನೀಡದೆ, ಏಕಾಏಕಿ ಕರೆದುಕೊಂಡು ಹೋಗಿದ್ದಾರೆ. ಈ ಮೂಲಕ ರಾಜಕೀಯವಾಗಿ ತೇಜೋವಧೆ ಮಾಡವ ಪ್ರಯತ್ನ ನಡೆದಿದೆ. ಇದೊಂದು ರಾಜಕೀಯ ಪ್ರೇರಿತವಾಗಿದ್ದು, ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ ಎಂದರು.
ವಿನಯ್ ಕುಲಕರ್ಣಿ ಮನೆತನದ ಇತಿಹಾಸ ಬಹಳ ದೊಡ್ಡದಿದೆ. ಈ ಪ್ರಕರಣದಲ್ಲಿ ಕುಲಕರ್ಣಿ ತಪ್ಪು ಮಾಡಿಲ್ಲ ಅಂತಾ ಜನ ಹೇಳುತ್ತಿದ್ದಾರೆ. ಹೀಗಾಗಿ ಸಿಬಿಐ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಈ ಮೂಲಕ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದರು.



