ಡಿವಿಜಿ ಸುದ್ದಿ, ಬೆಂಗಳೂರು : ಶಿರಾ, ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಇನ್ನೂ ಎರಡ್ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಉಪ ಚುನಾವಣೆಯ ಫಲಿತಾಂಶದ ನಂತರ ಮಾತನಾಡಿದ ಅವರು, ನಾವು ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವಂತ ಭರವಸೆ ಈಡೇರಿಸುತ್ತೇವೆ. 2 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸುತ್ತೇವೆ. ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದಗಳು ಎಂದು ತಿಳಿಸಿದರು.
ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಭೇಟಿ ಬಳಿಕ 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುವುದಾಗಿ ಹೇಳಿದರು.



