ಡಿವಿಜಿ ಸುದ್ದಿ, ಬೆಂಗಳೂರು: ಈಗಾಗಲೇ ಸರ್ಕಾರ ಪದವಿ ಕಾಲೇಜು ಆರಂಭಕ್ಕೆ ಅನುಮತಿ ನೀಡಿದ್ದು, ಸದ್ಯಕ್ಕೆ ಪಿಯು ಕಾಲೇಜು ಆರಂಭ ಇಲ್ಲ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆದ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ.ಪದವಿ ಶಿಕ್ಷಣಕ್ಕೂ ಕೂಡ ಪೋಷಕರ ಅನುಮತಿ ಕಡ್ಡಾಯವಾಗಿದ್ದು, ಯಾರಿಗೂ ಒತ್ತಾಯ ಮಾಡುವಂತಿಲ್ಲ. ಆನ್ ಲೈನ್ ಹಾಗೂ ಆಫ್ ಲೈನ್ ಎರಡಲ್ಲೂ ತರಗತಿ ನಡೆಯುತ್ತದೆ. ನವೆಂಬರ್ 17 ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.