ಬೆಂಗಳೂರು: ಏ.28 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿದ ಸಚಿವರು, ಹೆಚ್ಚುತ್ತಿರುವ ಕೊರೊನಾ ಸೋಂಕಿನಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಮೇಲೆ ಪ್ರಾಯೋಗಿಕ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.



