Connect with us

Dvgsuddi Kannada | online news portal | Kannada news online

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,201 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,201 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 ಕೊನೆಯ ದಿನವಾಗಿದೆ.

ಇಲಾಖೆಯ ಅಧಿಕೃತ ವೆಬ್ ತಾಣ https://er.indianrailways.gov.in/ ಗೆ ಭೇಟಿ ನೀಡಬಹುದು.ಶೈಕ್ಷಣಿಕ ವಿದ್ಯಾರ್ಹತೆ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ 10 ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. 10ನೇ ತರಗತಿ ಪಾಸ್ ಜತೆಗೆ ಐಟಿಐ ವಿವಿಧ ಟ್ರೇಡ್‌ಗಳಾದ ಫಿಟ್ಟರ್ / ವೆಲ್ಡರ್ / ಮೆಕ್ಯಾನಿಕಲ್ / ಮಷಿನಿಸ್ಟ್‌ / ಕಾರ್ಪೆಂಟರ್ / ಪೇಂಟರ್ / ಲೈನ್‌ಮೆನ್ / ವೈಯರ್‌ಮೆನ್ / ರೆಫ್ರಿಜೆರೇಟರ್ ಮತ್ತು ಎಸಿ ಮೆಕ್ಯಾನಿಕ್ / ಇಲೆಕ್ಟ್ರೀಷಿಯನ್ / ಟೂಲ್ ಮಷಿನಿಸ್ಟ್‌ ಯಾವುದೇ ಟ್ರೇಡ್ ಓದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 15 ರಿಂದ 24 ವರ್ಷದ ಒಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ ಮಾಡಿ ಬಳಿಕ ದಾಖಲಾತಿ ಪರಿಶೀಲನೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100 ಅರ್ಜಿ ಶುಲ್ಕ ಪಾವತಿಸಬೇಕು. SC/ST, PWBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ 8,000 ದಿಂದ 15,000 ಮಾಸಿಕ ವೇತನ ದೊರೆಯಲಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top