ಡಿವಿಜಿ ಸುದ್ದಿ,ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು (ಸೆ. 30ರಂದು) ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಭಾಗದ ತುಮಕೂರು, ರಾಮನಗರ, ಮೈಸೂರು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಪ್ರಭಾವ ಕಡಿಮೆಯಾಗಿದ್ದು, ಅ.1ರಿಂದ ರಾಜ್ಯದಾದ್ಯಂತ ಮಳೆ ಪ್ರಮಾಣ ತಗ್ಗಲಿದೆ. ಕರಾವಳಿ ಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ.



