Connect with us

Dvgsuddi Kannada | online news portal | Kannada news online

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ;  ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ;  ಸತತ ಮಳೆಗೆ ಜನ ಜೀವನ ಅಸ್ತವ್ಯಸ್ತ

ದಾವಣಗೆರೆ

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ;  ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ;  ಸತತ ಮಳೆಗೆ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,  ರಾಜ್ಯದ ವಿವಿಧೆಡೆ ಭಾರಿ ಮಳೆ  ಸುರಿಯುತ್ತಿದೆ. ಈ  ಮಳೆ ಮುಂದಿನ 4 ದಿನ ಇದೇ ರೀತಿ ಮುಂದುವರಿಯಲಿದೆ  ಎಂದು ಹವಾಮಾನ ಇಲಾಖೆ ಮಾಹಿತಿ ಮುನ್ಸೂಚನೆ ನೀಡಿದೆ.  ಇನ್ನು ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಸ್ವಲ್ಪ ವಿರಾಮ ನೀಡಿದ್ದ ಮಳೆ, ಇನ್ನು ಸತತವಾಗಿ ಸುರಿಯುತ್ತಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅ.7ರಿಂದ ಅ.10ರವರೆಗೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.  ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿಯೂ ಸಹ ಯೆಲ್ಲೋ ಅಲರ್ಟ್ ಇರಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top