ಡಿವಿಜಿ ಸುದ್ದಿ, ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ ಅ.13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಗ್ಗೆ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದು,ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದರು.



