Connect with us

Dvgsuddi Kannada | online news portal | Kannada news online

ಎರಡು ದಿನ ಕರಾವಳಿಯಲ್ಲಿ ರೆಡ್ ಅಲರ್ಟ್; ಅ. 15 ವರೆಗೂ ಭಾರೀ ಮಳೆ ಸಾಧ್ಯತೆ

ಪ್ರಮುಖ ಸುದ್ದಿ

ಎರಡು ದಿನ ಕರಾವಳಿಯಲ್ಲಿ ರೆಡ್ ಅಲರ್ಟ್; ಅ. 15 ವರೆಗೂ ಭಾರೀ ಮಳೆ ಸಾಧ್ಯತೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅ.12, 13ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು,ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅ. 15 ವರೆಗೆ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ವಾಯುಭಾರ ಕುಸಿತ ಕಂಡಿದ್ದು, ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯ
ಚೂರು, ಯಾದಗಿರಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು, ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top