ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜ.1ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರುವುದರಿಂದ ತುಂತುರು ಮಳೆಯಾಗಲಿದೆ. ಜ.2ರಿಂದ ರಾಜ್ಯದಲ್ಲಿ ಮಳೆ ಇರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. 2020ನೇ ವರ್ಷದ ಕೊನೇ ದಿನವಾದ ಗುರುವಾರ ರಾಜ್ಯದ ಕೆಲವೆಡೆ ತುಂತುರು ಮಳೆಯಾಗಿದೆ.