ಡಿವಿಜಿ ಸುದ್ದಿ, ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಈಗಾಗಲೇ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಮಹಾ ಮಳೆಗೆ ಹಲವಾರು ರಸ್ತೆಗಳು ಕೊಚ್ಚಿ ಹೋಗಿವೆ. ಸೇತುವೆಗಳು ಮುಳುಗಡೆಯಾಗಿವೆ. ಅಪಾರ ಪ್ರಮಾಣದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾನುವಾರ, ಸೋಮವಾರ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ಬಳ್ಳಾರಿ, ಧಾರವಾಡ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.



