ಬೆಂಗಳೂರು : ರಾಜ್ಯದ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳನ್ನು ಡಿ.1ರಿಂದ ಆರಂಭವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಇದುವರೆಗೆ ಪ್ರಕಟಿಸಿಲ್ಲ. ನವೆಂಬರ್ 17ರಿಂದ ಕಾಲೇಜುಗಳು ಆರಂಭವಾಗಲಿದೆ ಎಂದು ಈಗಾಗಲೇ ಘೋಷಣೆ ಮಾಡಿದೆ.
ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ.
— Dr Sudhakar K (@DrSudhakar_) November 13, 2020



