ಬೆಂಗಳೂರು: ನಿನ್ನೆ ಮೊನ್ನೆವರೆಗೂ ಫೋನ್ ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ ಎಂದು ಸಾಹಿತಿ, ನಿರ್ದೇಶಕ ಯೋಗರಾಜ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರೀಷ್ಮಾ ಹಿಲ್ಸ್ ನ ರವಿ ಬೆಳಗೆರೆಯ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು ಎಂದು ಹೇಳಿದರು. ಅವರಿಗೆ ಅನಾರೋಗ್ಯ ಕಾಡುತ್ತಲೇ ಇತ್ತು. ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಎಂದು ಹೊರಟುಬಿಟ್ಟಿದ್ದಾರೆನೋ ಅನ್ನಿಸುತ್ತಿದೆ ಎಂದು ಅವರು ಸಂತಾಸ ಸೂಚಿಸಿದರು. ರವಿ ಬೆಳೆಗೆರೆ ಅವರು ನೆನಪು, ಬರಹಗಳೊಂದಿಗೆ ನಮ್ಮೊಂದಿಗಿದ್ದಾರೆ. ಅವರು ಸಂಗೀತ ಪ್ರಿಯರಾಗಿದ್ದು, ನನ್ನದು ಅವರದ್ದು ಅದ್ಭುತ ಸ್ನೇಹ ಎಂದರು.
ನಿನ್ನೆ ಮೊನ್ನೆವರೆಗೂ ಫೋನ್ ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾ ಕುರಿತು ಮಾತನಾಡಿದ್ದೆ: ಯೋಗರಾಜ್ ಭಟ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment