ಡಿವಿಜಿ ಸುದ್ದಿ, ಬೆಂಗಳೂರು: ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ಸಿಗುವ ಭರವಸೆ ಇದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಬಗ್ಗೆ ಹಾದಿ ಬೀದಿಯಲ್ಲಿ ನಾನು ಮಾತನಾಡುವುದಿಲ್ಲ. ಆದರೆ ಈ ಬಗ್ಗೆ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ ಎಂದರು. ವಿಜಯೇಂದ್ರ ಅವರು ಬಸವಕಲ್ಯಾಣದಿಂದ ಸ್ಪರ್ಧಿಸುವ ಕುರಿತು ಕಾರ್ಯಕರ್ತರು, ಮುಖಂಡರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ ವಿಜಯೇಂದ್ರ ಸ್ಪರ್ಧೆ ಮಾಡುವ ಬಗ್ಗೆ ಎಲ್ಲೂ ಹೇಳಿಲ್ಲ.
ಯುವ ನಾಯಕರಾಗಿ ವಿಜಯೇಂದ್ರ ಬೆಳೆಯುತ್ತಿದ್ದಾರೆ. ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡಬಹುದು. ಸ್ಪರ್ಧೆ ಮಾಡಿದರೆ ಗೆಲುವು ಖಚಿತ. ಆದರೆ ಅವರು ಸ್ಪರ್ಧೆ ಮಾಡಲಿ ಎಂದು ಹೇಳುವ ಅಧಿಕಾರ ನನಗಿಲ್ಲ. ಬಸವಕಲ್ಯಾಣದಿಂದ ಸ್ಪರ್ಧಿಸಿದರೆ ಖಂಡಿತ ಗೆಲ್ಲುತ್ತಾರೆ. ಆದರೆ ವಿಜಯೇಂದ್ರ ಹಾಗೂ ಮುಖ್ಯಮಂತ್ರಿಗಳಿಗೆ ಆ ಬಗ್ಗೆ ಮನಸ್ಸಿಲ್ಲ ಎಂದರು.



