ದೆಹಲಿ : 2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವೈ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಆರೋಪದ ಮೇಲೆ ಹಿರಿಯ ಪತ್ರಕರ್ತ ಹಾಗೂ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಅಲಿಬಾಗ್‌ನ 53 ವರ್ಷದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ ಅವರು 2018ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.ಗೋಸ್ವಾಮಿ ವಿರುದ್ಧ ಭಾರತೀಯ ಪೀನಲ್ ಕೋಡ್ (ಐಪಿಸಿ) ಕಲಂ 306 (ಆತ್ಮಹತ್ಯೆ) ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಎರಡು ವರ್ಷಗಳ ಹಿಂದೆ ಈ ಘಟನೆಗೆ ಸಂಬಂಧಿಸಿದಂತೆ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ 2019ರಲ್ಲಿ ರಾಯಗಡ ಪೊಲೀಸರು ಪ್ರಕರಣ ಮುಚ್ಚಿದ್ದರು.
ಆತ್ಮಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ದೊರೆತಿದ್ದ ಪತ್ರದಲ್ಲಿ, ತಮಗೆ ಪಾವತಿಸಬೇಕಿದ್ದ 5.40 ಕೋಟಿಗಳನ್ನು ಅರ್ನಬ್ ಗೋಸ್ವಾಮಿ ಪಾವತಿಸಿಲ್ಲ. ಆ ಕಾರಣ ನಮ್ಮ ಕುಟುಂಬ ತೀವ್ರ ಆರ್ಥಿಕ ತೊಂದರೆಗೆ ಒಳಗಾಯಿತು ಎಂದು ಅನ್ವಯ್ ನಾಯಕ್ ಬರೆದುಕೊಂಡಿದ್ದರು.ಘಟನೆಗೆ ಸಂಬಂಧಿಸಿದಂತೆ ಅಲಿಬಾಗ್ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. 2020ರ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು.



