ಡಿವಿಜಿ ಸುದ್ದಿ, ಬೆಂಗಳೂರು : ಆರ್ ಆರ್ ನಗರದಲ್ಲಿ ಬಿಜೆಪಿ ಮುನಿರತ್ನ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. 57 672 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಸತತ ಮೂರನೇ ಬಾರಿ ಗೆಲುವು ದಾಖಲಿಸಿದ್ದಾರೆ. ಮುನಿರತ್ನ 125665 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ನ ಹೆಚ್ ಕುಸುಮಾ 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ಕೃಷ್ಣ ಮೂರ್ತಿ 9502 ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 57672 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.



