ಡಿವಿಜಿ ಸುದ್ದಿ, ಮೈಸೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅಖಾಡಕ್ಕೆ ಇಳಿದಿದ್ದಾರೆ. ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಅಧಿಕೃತ ಅಭ್ಯರ್ಥಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ವತಿಯಿಂದ ಆರ್ ಆರ್ ನಗರಕ್ಕೆ ಒಂದೇ ಹೆಸರನ್ನು ದೆಹಲಿಗೆ ಕಳುಹಿಸಿತ್ತು. ಹೀಗಾಗಿ ಕುಸುಮಾ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ಧಾರೆ ಎಂದಿದ್ದಾರೆ.
ಕುಸುಮಾ ಬಗ್ಗೆ ಡಿಕೆ ರವಿ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಈ ಪ್ರತಿಕ್ರಿಸಿ ಸಿದ್ದರಾಮಯ್ಯ, ವಿರೋಧ ಮಾಡುವವರ ಬಗ್ಗೆ ನಾವು ಮಾತನಾಡುವುದಿಲ್ಲ. ನಮ್ಮ ಅಭ್ಯರ್ಥಿ ಪರ ಮಾತ್ರ ಜನರ ಬಳಿ ಮತ ಕೇಳಲಿದ್ದೇವೆ. ಈ ಬಗ್ಗೆ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದ ತಿಳಿಸಿದರು.
ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕುಸುಮಾ ತಂದೆ, ಭಾನುವಾರವಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಮುನಿರತ್ನ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರಿಂದ ಉಪ ಚುನಾವಣೆ ಎದುರಾಗಿದೆ.



