ಡಿವಿಜಿ ಸುದ್ದಿ, ಬೆಂಗಳೂರು: ಜಿದ್ದಾಜಿದ್ದಿನ ಕಣವಾಗಿರುವ ವಿಧಾನಸಭೆ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ( ನ.01) ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ.
ನಾಳೆ ಮತದಾನ ನಡೆಯಲಿದ್ದು, ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ ಬಿ ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ಸ್ಪರ್ಧೆ ಇದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.
ಎರಡೂ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಸೋಲು ಗೆಲುವಿನ ರಣತಂತ್ರಗಳು, ಲೆಕ್ಕಾಚಾರಗಳು ಜೋರಾಗಿದೆ. ಶಾಂತಿಯುತ ಮತದಾನಕ್ಕೆ ಬೇಕಾದಂತ ಸಕಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡಿಕೊಂಡಿದೆ.
ಕಾಂಗ್ರೆಸ್-ಬಿಜೆಪಿಯ ಪ್ರತಿಷ್ಠೆಯ ಕಣವಾಗಿರುವ ಆರ್‍ಆರ್ ನಗರದಲ್ಲಿ ಡಿಕೆ ಶಿವಕುಮಾರ್ ಮತ್ತು ಮುನಿರತ್ನ ನಡುವೆ ಜಿದ್ದಾಜಿದ್ದಿ ನಡೆದಿದೆ. ಆದರೆ, ಜನಾಶೀರ್ವಾದ ನಮ್ಮ ಪರ ಇದೆ ಅಂತ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತ ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಪರವಾಗಿ ದಳಪತಿಗಳು ನಿನ್ನೆ ಭರ್ಜರಿ ರ‍್ಯಾಲಿಗಳನ್ನು ನಡೆಸಿದರು.