ಚೆನ್ನೈ: ಖ್ಯಾತ ಗಾಯಕ ಎಸ್ .ಬಿ. ನಾಲಸುಬ್ರಹ್ಮಣ್ಯಂ (74) ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 51 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1 ಗಂಟೆ 04 ನಿಮಿಷಕ್ಕೆ ಸಾವನ್ನಪ್ಪಿದ್ದಾರೆ ಎಂದು ಎಸ್ ಪಿಬಿ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ.

50 ವರ್ಷಗಳ ಕಾಲ ಭಾರತೀಯ 16 ಭಾಷೆಯಲ್ಲಿ ಹಾಡುಗಳನ್ನು ಹಾಡಿದ್ದರು. ಎಸ್ ಪಿಬಿ ನಿಧನಕ್ಕೆ ದಕ್ಷಿಣ ಭಾರತೀಯ ಚಿತ್ರರಂಗ ಮಾತ್ರವಲ್ಲದೆ, ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.



