Connect with us

Dvgsuddi Kannada | online news portal | Kannada news online

ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನ : ಶಿಕ್ಷಣ ಸಚಿವ ಸುರೇಶ್ ಕುಮಾರ್

ರಾಜ್ಯ ಸುದ್ದಿ

ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಚಾಮರಾಜನಗರ: ಶಾಲೆ ಆರಂಭದ ಕುರಿತು ಪೋಷಕರಲ್ಲಿ ಗೊಂದಲ ಉಂಟಾಗಿದ್ದು, ಈ ಕುರಿತು ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭದ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಕುರಿತು ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ಸದ್ಯಕ್ಕೆ ಶಾಲೆ ತೆರೆಯುವುದಿಲ್ಲ. ಅಕ್ಟೋಬರ್ 15ರಿಂದ ಕೇಂದ್ರ ಸರ್ಕಾರ ಹಂತ ಹಂತವಾಗಿ ಶಾಲೆ ಪ್ರಾರಂಭಿಸಬಹುದೆಂದು ಅವಕಾಶ ನೀಡಿದೆ. ಆದರೆ ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.

ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳು, ಜನ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುವ ನಿರ್ಧಾರ ಮಾಡಿದ್ದೇವೆ. ಯಾವಾಗ ಶಾಲೆ ಆರಂಭಿಸಬೇಕು ಎಂಬ ಬಗ್ಗೆ ಒಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top
(adsbygoogle = window.adsbygoogle || []).push({});