ಬೆಂಗಳೂರು: ರಾಜ್ಯ ಸರ್ಕಾರ ಜನವರಿ1ರಿಂದ ಶಾಲೆ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಇದರ ಬೆನ್ನಲ್ಲೇ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) ನಾಳೆಯಿಂದ ಬಂದ್ ಗೆ ಕರೆ ನೀಡಿದೆ.
ರಾಜ್ಯ ಸರ್ಕಾರ ಕೊರೊನಾ ಸೋಂಕಿನ ಭೀತಿಯ ನಡುವೆಯೇ ಜನವರಿ 1ರಿಂದ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ. ಶಾಲಾ-ಕಾಲೇಜು ಆರಂಭದ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
ಈ ಬಗ್ಗೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಮಾತನಾಡಿ, ರಾಜ್ಯ ಸರ್ಕಾರವು ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸದಿದ್ದರೆ, ನಾಳೆಯಿಂದ ಎಲ್ಲ ಶೈಕ್ಷಣಿಕ ಚಟುವಟಿಕೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರಕ್ಕೆ ನಾವು 15 ಬೇಡಿಕೆಗಳನ್ನು ಇಟ್ಟಿದ್ದೇವೆ. ಈ ಬೇಡಿಕೆಗಳನ್ನು ಸರ್ಕಾರ 10 ರಿಂದ 15 ದಿನಗಳ ವರೆಗೆ ನಮ್ಮ ಬೇಡಿಕೆ ಈಡೇರಿಸದಿದ್ದರೆ. ಆನ್ ಲೈನ್-ಆಫ್ ಲೈನ್ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.