ದಾವಣಗೆರೆ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅ.18 ರಿಂದ 21 ರವರೆಗೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.
ಕೃಷಿ-ತೋಟಗಾರಿಕೆ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡುವರು. ಈ ಮೇಳದಲ್ಲಿ ನೂತನ ಕೃಷಿ ಪದ್ದತಿ, ವಿವಿಧ ತಳಿಗಳ ಪರಿಚಯ, ಕೃಷಿಯಲ್ಲಿ ಆಧುನಿಕತೆ ಸೇರಿದಂತೆ ವಸ್ತುಪ್ರದರ್ಶನ ಮತ್ತು ಮಾಹಿತಿಯನ್ನು ನೀಡಲಾಗುತ್ತದೆ. ವಿವಿ ವ್ಯಾಪ್ತಿಯ. ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಿ ಇದರ ಲಾಭ ಪಡೆಯಬೇಕೆಂದು ಕೋರಲಾಗಿದೆ.