Connect with us

Dvgsuddi Kannada | online news portal | Kannada news online

ಮಾ.17 ರಿಂದ ನಾಲ್ಕು ದಿನ ಕೃಷಿ, ತೋಟಗಾರಿಕೆ ಮೇಳ; ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ, ನವ ತಂತ್ರಜ್ಞಾನ ಮಾಹಿತಿ ಪಡೆಯಿರಿ…

ಪ್ರಮುಖ ಸುದ್ದಿ

ಮಾ.17 ರಿಂದ ನಾಲ್ಕು ದಿನ ಕೃಷಿ, ತೋಟಗಾರಿಕೆ ಮೇಳ; ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ, ನವ ತಂತ್ರಜ್ಞಾನ ಮಾಹಿತಿ ಪಡೆಯಿರಿ…

ಶಿವಮೊಗ್ಗ: ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ‘ಸುಸ್ಥಿರ ಆದಾಯಕ್ಕಾಗಿ-ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ’ ಎಂಬ ಘೋಷವಾಕ್ಯದಡಿಯಲ್ಲಿ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಮಾ.17 ರಿಂದ 20 ರವರೆಗೆ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ನೂತನ ತಳಿ ಮತ್ತು ತಾಂತ್ರಿಕತೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳು ಹಾಗೂ ಜೈವಿಕ ಪರಿಕರಗಳ ಪ್ರದರ್ಶನ, ರೈತ-ವಿಜ್ಞಾನಿಗಳ ಸಂವಾದ ಕಾರ್ಯಕ್ರಮಗಳು, ಕೃಷಿ ಸಂಬಂಧಿತ ವಿಚಾರ ಗೋಷ್ಠಿ ಮತ್ತು ತಾಂತ್ರಿಕ ಸಮಾವೇಶವನ್ನು ಏರ್ಪಡಿಸಲಾಗಿರುತ್ತದೆ.

ಪ್ರಸಕ್ತ ವರ್ಷದ ಮೇಳದಲ್ಲಿನ ಪ್ರಮುಖ ವಿಶೇಷತೆಗಳೆಂದರೆ, ಹೈಟೆಕ್ ತೋಟಗಾರಿಕೆ, ಪುಷ್ಪ ಕೃಷಿ, ತಾರಸಿ ತೋಟ ಮತ್ತು ಲಂಬ ತೋಟ, ಸಂರಕ್ಷಿತ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯ ವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿಯ ಪ್ರಾತ್ಯಕ್ಷಿಕೆಗಳ ಪ್ರದರ್ಶನವಿರುತ್ತದೆ ಮತ್ತು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಏಳು ಜಿಲ್ಲೆಗಳ ಯಶಸ್ವಿ ಪ್ರಗತಿಪರ ಕೃಷಿಕರುಗಳಿಗೆ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ಮೇಳದಲ್ಲಿ ವಸ್ತು ಪ್ರದರ್ಶನ ಅಥವಾ ಮಾರಾಟಕ್ಕೆ ಮಳಿಗೆಗಳನ್ನು ಕಾಯ್ದಿರಿಸಲು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣದ www.https://uahs.edu.in ನಿಂದ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಳಿಗೆ ಹಂಚಿಕೆ ಸಮಿತಿಯ ಸಹ ವಿಸ್ತರಣಾ ನಿರ್ದೇಶಕರು ಮತ್ತು ಅಧ್ಯಕ್ಷರಾದ ಡಾ.ಎಸ್.ಯು. ಪಾಟೀಲ್-9448154542 ಮತ್ತು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಬಿ.ಸಿ. ಹನುಮಂತಸ್ವಾಮಿ 9480838976 ಇವರನ್ನು ಸಂಪರ್ಕಿಸಬಹುದೆಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ವಿಸ್ತರಣಾ ನಿರ್ದೇಶಕರಾದ ಡಾ.ಬಿ. ಹೇಮ್ಲಾ ನಾಯಕ್ ಅವರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top