Connect with us

Dvgsuddi Kannada | online news portal | Kannada news online

ಬೇಕರಿ ತೆರೆಯುವ ಯೋಜನೆ ಇದ್ಯಾ..? ಇಲ್ಲಿದೆ ತೋಟಗಾರಿಕೆ ವಿವಿಯಿಂದ ಒಂದು ತಿಂಗಳ ಬೇಕರಿ ಉತ್ಪನ್ನ ತಯಾರಿಕ ತರಬೇತಿ

ಸ್ಪೆಷಲ್

ಬೇಕರಿ ತೆರೆಯುವ ಯೋಜನೆ ಇದ್ಯಾ..? ಇಲ್ಲಿದೆ ತೋಟಗಾರಿಕೆ ವಿವಿಯಿಂದ ಒಂದು ತಿಂಗಳ ಬೇಕರಿ ಉತ್ಪನ್ನ ತಯಾರಿಕ ತರಬೇತಿ

ಶಿವಮೊಗ್ಗ: ಬೇಕರಿ ತೆರೆಯುವ ಯೋಜನೆ ಇದ್ಯಾ..? ಮತ್ತೆ, ಇನ್ಯಾಕೆ ತಡ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ನ.13 ರಿಂದ ಡಿ.12 ರವರೆಗೆ ಒಂದು ತಿಂಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.

ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ನ.11 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 3500/- ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಸ್ಪೆಷಲ್

To Top