ಡಿವಿಜಿ ಸುದ್ದಿ, ತುಮಕೂರು : ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಭರ್ಜರಿ ಜಯ ದಾಖಲಿಸಿದ್ದಾರೆ. ಭಾರೀ ಜಿದ್ದಾಜಿನ ಕ್ಷೇತ್ರವಾಗಿದ್ದ ಶಿರಾದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಬಿಗ್ ಫೈಟ್ ಏರ್ಪಟ್ಟಿತ್ತು. ಬಿಜೆಪಿ ಅಸ್ಥಿತ್ವವೇ ಇಲ್ಲದ ಶಿರಾದಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿಯ ರಾಜೇಶ್ ಗೌಡಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಡುವೆ ತೀವ್ರ ಪೈಪೋಟಿ ಕೊಟ್ಟಿದ್ದರು. ಕೊನೆಯ ವರೆಗೂ ಫೈಟ್ ಕೊಟ್ಟಿದ್ದರು. ಈ ಪೈಪೋಟಿಯ ನಡುವೆಯೂ 11 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ಪಡೆದುಕೊಂಡಿದ್ದಾರೆ.
ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ 69559 ಮತ ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 58,190 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 32,508 ಮತಗಳನ್ನು ಗಳಿಸಿದ್ದಾರೆ



