Connect with us

Dvgsuddi Kannada | online news portal | Kannada news online

ಶಿವಮೊಗ್ಗದಲ್ಲಿ ಎರಡು ಬಸ್ ನಡುವೆ ಭೀಕರ ಅಪಘಾತ; 50 ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಎರಡು ಬಸ್ ನಡುವೆ ಭೀಕರ ಅಪಘಾತ; 50 ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ‌. ಖಾಸಗಿ ಬಸ್​ ಶಿವನೊಗ್ಗದಿಂದ ಶೃಂಗೇರಿಗೆ ಹಾಗೂ ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುವಾಗ ಮುಖಾಮುಖಿ ಡಿಕ್ಕಿ ಹೊಡೆದಿವೆ. 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಖಾಸಗಿ ಬಸ್​ನಲ್ಲಿ 35ಕ್ಕೂ ಹೆಚ್ಚು ಮತ್ತು ಕೆಎಸ್​ಆರ್​ಟಿಸಿ ಬಸ್​​ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರಿದ್ದು. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top