ಹಾಸನ: ಜೈನಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಶ್ರೀಗಳು ವಿಧಿವಶರಾಗಿದ್ದು, ಮಠದಲ್ಲಿ ನೀರವ ಮೌನ ಆವರಿಸಿದೆ. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ.



