ಇಂದಿನಿಂದ ಸೆ.24ರವರೆಗೆ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಸಿರಿಗೆರೆ: ತರಳಬಾಳು ಬೃಹನ್ಮಠದ ಶ್ರೀ ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 32ನೇ ಶ್ರದ್ಧಾಂಜಲಿ ಸಮಾರಂಭವು ಇಂದಿನಿಂದ (ಸೆ.20) ಸೆ. 24ರವರೆಗೆ ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ನಡೆಯಲಿದೆ. ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅರ್ಥಪೂರ್ಣ ಆಚರಣೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವಂಕಟೇಶ್, ಎಂಎಲ್‌ಸಿ ಡಾ. ಧನಂಜಯ್‌ ಸರ್ಜಿ, ಶಿವಮೊಗ್ಗ ಹಾಲು ಒಕ್ಕೂಟ ಸಂಘದ ಅಧ್ಯಕ್ಷ ವಿದ್ಯಾಧರ್, ಹಾಸ್ಯ ಸಾಹಿತಿ ಎಂ.ಎಸ್. ನರಸಿಂಹಮೂರ್ತಿ ಇತರರು ಪಾಲ್ಗೊಳ್ಳಲಿದ್ದಾರೆ.

ಸೆ. 21ರ ಶನಿವಾರ ಸಂಜೆ 6 ಗಂಟೆಗೆ ಜರುಗುವ ಸಮಾರಂಭದಲ್ಲಿಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಶಾಸಕ ಹೆಚ್.ಡಿ.ತಮ್ಮಯ್ಯ, ಮಾಜಿ ಸಚಿವ ಹೆಚ್. ಆಂಜನೇಯ, ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಂ. ಗಂಗಾಧರಸ್ವಾಮಿ, ಚಿತ್ರದುರ್ಗ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.

ಸೆ. 22ರ ಭಾನುವಾರ ಸಂಜೆ 6ಕ್ಕೆ ಏರ್ಪಾಡಾಗಿರುವ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಡಾ. ಎಂ. ಚಂದ್ರಪ್ಪ ಶಿವಗಂಗಾ ಬಸವರಾಜು, ಬಿ. ದೇವೇಂದ್ರಪ್ಪ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ‌ಅಧ್ಯಕ್ಷೆ ಶುಭಾ ಧನಂಜಯ್, ರಂಗಕರ್ಮಿ ಎಸ್.ಎನ್. ಸೇತೂರಾಂ,‌ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್‌, ವೈ. ವೃಷಭೇಂದ್ರಪ್ಪ ಇತರರು ಉಪಸ್ಥಿತರಿರುವರು.

ಸೆ. 23ರ ಸೋಮವಾರ ಸಂಜೆ 6ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಬಿ.ವೈ ವಿಜಯೇಂದ್ರ, ಡಿ.ಜೆ. ಶಾಂತನಗೌಡ, ಕೃಷಿ ವಿಜ್ಞಾನಿ ಡಾ. ಎಸ್.ಎಲ್. ಕೃಷ್ಣಮೂರ್ತಿ,‌ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜಮೂರ್ತಿ, ಕುಲಪತಿಗಳಾದ,‌ಸೂರ್ಯಪ್ರಸಾದ, ನಿವೃತ್ತ ಪ್ರಾಚಾರ್ಯ ಡಾ. ನಾ ಲೋಕೇಶ್ ಒಡೆಯರ್
ಭಾಗವಹಿಸುವರು.

ಸೆ. 24ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್‌ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವ ಎಂ.ಬಿ.ಪಾಟೀಲ್, ಸಚಿವ ಈಶ್ವರ್ ಬಿ. ಖಂಡ್ರೆ, ಜಿ.ಎಂ.ಸಿದ್ದೇಶ್ವರ, ಸಾಧುಸದ್ದರ್ಮ ವೀರಶೈವ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ,ಶಂಕರ್ ಬಿದರಿ ಪಾಲ್ಗೊಳ್ಳಲಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *