ಬೆಂಗಳೂರು: ಭಾರತದ ಕ್ರಿಕೆಟಿಗ ಹಾಗೂ ಕರ್ನಾಟ ರಾಜ್ಯ ಕ್ರಿಕೆಟ್ ನಲ್ಲಿ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿ ಪಡೆದಿದ್ದ ಆರ್. ವಿನಯ್ ಕುಮಾರ್ ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಕರ್ನಾಕಟ ಕ್ರಿಕೆಟ್ ತಂಡದ ಮಾಜಿ ನಾಯಕ ವಿನಯ್ ಕುಮಾರ್, ನನ್ನ ಕ್ರಿಕೆಟ್ ಜೀವನಕ್ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಇಂದು ನಾನು ನನ್ನ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳುತ್ತಿರುವುದದಾಗಿ ಘೋಷಿಸಿದ್ದಾರೆ.
Thankyou all for your love and support throughout my career. Today I hang up my boots. 🙏🙏❤️ #ProudIndian pic.twitter.com/ht0THqWTdP
— Vinay Kumar R (@Vinay_Kumar_R) February 26, 2021
ಕಳೆದ 25 ವರ್ಷಗಳಲ್ಲಿ ಅನೇಕ ಸ್ಟೇಷನ್‌ಗಳನ್ನು ಹಾದು ಹೋಗಿರುವ ದಾವಣಗೆರೆ ಎಕ್ಸ್‌ಪ್ರೆಸ್, ಕೊನೆಗೂ ನಿವೃತ್ತಿ ಎಂಬ ಸ್ಟೇಷನ್‌ಗೆ ತಲುಪಿದೆ ಎಂದು ಟ್ವಿಟರ್ ನಲ್ಲಿ ಬರೆದುಕೊಳ್ಳುವ ಮೂಲಕ ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದೊಂದು ಸುಲಭವಾದ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಂತೆ ನನ್ನ ಜೀವನದಲ್ಲೂ ಆ ದಿನ ಬಂದಿದೆ ಎಂದಿದ್ದಾರೆ.



