ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೆಜೆಂಡರಿ ಲೆಗ್ ಸ್ಪಿನ್ನರ್ ಬೌಲರ್ ಆಗಿದ್ದ 52 ವರ್ಷದ ವಾರ್ನ್ , ವಿಶ್ವದ ಶ್ರೇಷ್ಠ ಕ್ರಿಕೆಟರ್ ಗಳಲ್ಲಿ ಒಬ್ಬರಾಗಿದ್ದರು.
ಥೈಲ್ಯಾಂಡ್‌ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್‌ನ ವರದಿ ಮಾಡಿದೆ. ವಾರ್ನ್ ಅವರು ಥಾಯ್ಲೆಂಡ್‌ನ ವಿಲ್ಲಾದಲ್ಲಿ ನೆಲೆಸಿದ್ದರು. ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್ ಅವರ ಆಪ್ತ ವಲಯ ಮಾಹಿತಿ ನೀಡಿದೆ.
ವಾರ್ನ್ 15 ವರ್ಷಗಳಿಂದ ಆಸ್ಟ್ರೇಲಿಯಾ ಪರ ಶ್ರೇಷ್ಠ ಬೌಲರ್ ಆಗಿದ್ದು 708 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸುಮಾರು 16 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ, ವಾರ್ನ್ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಒಬ್ಬರಾಗಿದ್ದರು. ತಮ್ಮ 145 ಟೆಸ್ಟ್ ವೃತ್ತಿಜೀವನದಲ್ಲಿ 708 ವಿಕೆಟ್‌ಗಳನ್ನು ಪಡೆದುದ್ದಾರೆ.194 ಏಕದಿನ ಪಂದ್ಯಗಳಲ್ಲಿ 293 ವಿಕೆಟ್‌ಗಳನ್ನು ಪಡೆದಿದ್ದಾರೆ. ಜೊತೆಗೆ 1999 ರ ವಿಶ್ವಕಪ್ ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು.