Connect with us

Dvgsuddi Kannada | online news portal | Kannada news online

ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡುವುದರಿಂದ ಹಿನ್ನೆಡೆಯಾಗುವ ಪ್ರಶ್ನೆಯೇ ಇಲ್ಲ: ಶ್ರೀರಾಮುಲು

ಪ್ರಮುಖ ಸುದ್ದಿ

ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡುವುದರಿಂದ ಹಿನ್ನೆಡೆಯಾಗುವ ಪ್ರಶ್ನೆಯೇ ಇಲ್ಲ: ಶ್ರೀರಾಮುಲು

ಚಿತ್ರದುರ್ಗ: ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆ ಮಾಡಲು ಸಿಎಂ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಿಂದ ರಾಮುಲು ಪಡೆಗೆ ಯಾವುದೇ ಹಿನ್ನಡೆಯಾಗುವ ಪ್ರಶ್ನೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬಳ್ಳಾರಿ ದೊಡ್ಡ ಜಿಲ್ಲೆಯಾಗಿತ್ತು, ಇದನ್ನ ವಿಭಜಿಸುವ ಮೂಲಕ ಸಿಎಂ ಸರಿಯಾದ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಸೋಮಶೇಖರ್ ರೆಡ್ಡಿ ಅವರಿಗೆ ಅಸಮಾಧಾನವಿಲ್ಲ. ಅವರನ್ನ ನಾನು, ಸಿಎಂ ಇಬ್ಬರೂ ಮನವೊಲಿಸಿದ್ದೇವೆ ಎಂದು ಹೇಳಿದರು.

ಇನ್ನು ಮೊಳಕಾಲ್ಮೂರು ತಾಲ್ಲೂಕನ್ನು ಬಳ್ಳಾರಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿ ಅಖಂಡವಾಗಿದ್ದ ಜಿಲ್ಲೆ, ಇಂದು ಪ್ರತ್ಯಕ ಜಿಲ್ಲೆಯಾಗಿದೆ. ಮೊಳಕಾಲ್ಮೂರು ಜನ ಆರ್ಟಿಕಲ್‍ – 371ಜೆಗೆ ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಯಾವ ರೀತಿ ತೀರ್ಮಾನ ಕೈಗೊಳ್ಳಬೇಕು ಎಂದು ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದರೆ ಮೊಳಕಾಲ್ಮೂರು  371ಜೆಗೆ ಸೇರ್ಪಡೆ ಆದರೆ ಉತ್ತಮವೆಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top