ದಾವಣಗೆರೆ: ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ ಆಗಲಿದ್ದು, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 22,226 ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಕೆ.ಎಸ್.ಆರ್.ಟಿ.ಸಿ ಯವರು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಮಾ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಪರೀಕ್ಷಾ ದಿನಗಳಂದು ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಮತ್ತು ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ಎಸ್.ಓ.ಪಿ ಗಳನ್ನು ಸರಿಯಾಗಿ ಪಾಲಿಸಬೇಕಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು/ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೊಂದಿಗೆ) ನಿಯೋಜಿಸಲಾಗುವುದು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳು ಇದ್ದರೆ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿಯಂತೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೇರಾಕ್ಸ್ ಅಂಗಡಿಗಳು, ಸೈಬರ್‍ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.