Connect with us

Dvgsuddi Kannada | online news portal | Kannada news online

SSLC ಪರೀಕ್ಷೆ:  ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶವಿಲ್ಲ, ಮಾಸ್ಕ್ ಕಡ್ಡಾಯವಲ್ಲ;  ಸಚಿವ ಬಿ.ಸಿ.ನಾಗೇಶ್

ದಾವಣಗೆರೆ

SSLC ಪರೀಕ್ಷೆ:  ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶವಿಲ್ಲ, ಮಾಸ್ಕ್ ಕಡ್ಡಾಯವಲ್ಲ;  ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಈ ವರ್ಷದ SSLC ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದ್ರೆ ಪರೀಕ್ಷೆಗೆ ಅವಕಾಶವಿಲ್ಲ. ಇನ್ನೂ ಕೊರೊನಾ ನಿಯಂತ್ರಣ ಹಿನ್ನೆಲೆ ಮಾಸ್ಕ್ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಬಾರಿ ಒಟ್ಟು8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೈಕೋರ್ಟ್ ಆದೇಶ ಹಿನ್ನೆಲೆ  ಯಾವುದೇ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ. ಕೋವಿಡ್ ನಿಯಂತ್ರಣದಲ್ಲಿರುವುದರಿಂದ ಈ ಬಾರಿ ಪರೀಕ್ಷೆಗೆ ಕೆಲ ಮಾರ್ಗ ಸೂಚಿಗಳನ್ನು ಸಡಿಲಗೊಳಿಸಲಾಗಿದೆ. ಮಾಸ್ಕ್ ಕಡ್ಡಾಯವಿರುವುದಿಲ್ಲ. ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷೆಯ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು. ಪ್ರತಿದಿನ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top