Connect with us

Dvg Suddi-Kannada News

ದಾವಣಗೆರೆ: SSLC ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೇರ ಫೋನ್ ಇನ್ ಕಾರ್ಯಕ್ರಮ

ಪ್ರಮುಖ ಸುದ್ದಿ

ದಾವಣಗೆರೆ: SSLC ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೇರ ಫೋನ್ ಇನ್ ಕಾರ್ಯಕ್ರಮ

ದಾವಣಗೆರೆ: ಜೂನ್ 2021ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಚೇರಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾ.8 ರಿಂದ 31 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 5.30 ರ ವರೆಗೆ ವಿದ್ಯಾರ್ಥಿಗಳು ಫೋನ್ ಮೂಲಕ ಮಾಹಿತಿ ಪಡೆಯಬಹುದು.

ದೂರವಾಣಿ ಸಂಖ್ಯೆ 08192-231607 ಗೆ ಕರೆ ಮಾಡಿ ಮಕ್ಕಳು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top