ನವದೆಹಲಿ : 2018ರಲ್ಲಿ ನಡೆದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಜಾಮೀನು ಮಂಜೂರು ನಿರಾಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ ಜಾಮೀನು ಮಂಜೂರು ಮಂಜೂರು ಮಾಡಿದೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರ ಕಾಲ ಕಸ್ಟಡಿಯಲ್ಲಿರುವ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಭಾರಿ ರಿಲೀಫ್ ನೀಡಿದೆ. ಅರ್ನಬ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಜಾಮೀನು ನೀಡಿದೆ. ಅರ್ನಾಬ್ ಸೇರಿದಂತೆ ಇತರ ಇಬ್ಬರು ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.



