ಕೊಟ್ಟೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ.28ರಿಂದ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವ ಇಂದು (ಫೆ.05) ಕೊನೆಯ ದಿನವಾಗಿದೆ. ಬೆಳಗ್ಗೆ 7.30ಕ್ಕೆ ಕೊಟ್ಟೂರು ನಗರದ ಪ್ರಮುಖ ರಸ್ತೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಪ್ರಭಾತ್ ಫೇರಿ, ಬೆಳಗ್ಗೆ 9 ಗಂಟೆಗೆ ವಿಜಯ ನಗರ ಜಿಲ್ಲಾಧಿಕಾರಿ ಕೆ. ವೆಂಕಟೇಶ್ ಅವರಿಂದ ಧ್ವಜರೋಹಣ ನಡೆಯಿತು. ಇದಾದ ಬಳಿಕ ದಾವಣಗೆರೆಯ ಅನುಭವ ಮಂಟಪ್ಪದ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್ ಮಕ್ಕಳಿಂದ ವಿಶೇಷ ಕವಾಯತು ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಅಡ್ಡಪಲ್ಲಕ್ಕಿ ಉತ್ಸವದಲ್ಲಿ (ವಿಶೇಷ ವಾಹನದಲ್ಲಿ ) ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸದ್ಧರ್ಮ ಸಿಂಹಾಸನಾರೋಹಣ ಮಾಡಲಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ಜೆ.ಸಿ.ಮಾಧುಸ್ವಾಮಿ, ಮುರುಗೇಶ ನಿರಾಣಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ ಪಾಲ್ಗೊಳ್ಳಲಿದ್ದಾರೆ. ಡಾ.ಗುರುರಾಜ ಕರಜಗಿ ಉಪನ್ಯಾಸ ನೀಡಲಿದ್ದಾರೆ.
ತರಳಬಾಳು ಹುಣ್ಣಿಮೆ ಮಹೋತ್ಸವ ಕೊನೆ ದಿನ; ವಿಶೇಷ ವಾಹನದಲ್ಲಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



