ಸಿರಿಗೆರೆ: ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಅಭಿಲಾಷೆಯಂತೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿರಿಗೆರೆಯಲ್ಲಿ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉಚಿತವಾಗಿ ಓದಲು ತರಳಬಾಳು ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.80 ಹಾಗೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಸಿರಿಗೆರೆಯಲ್ಲಿ ಎಂ ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಿಜ್ಞಾನ ವಿಭಾಗ ದ ಶಿಕ್ಷಣ ಕ್ಕೆ ಉಚಿತ ಊಟ ವಸತಿ ಹಾಗೂ ಕಾಲೇಜು ಶುಲ್ಕವನ್ನು ನೀಡಲಾಗುತ್ತದೆ.
ಲಿಖಿತ ಪರೀಕ್ಷೆಯ ದಿನಾಂಕ 22-05-23 ರಂದು ಬೆಳಗ್ಗೆ 11.30 ನಡೆಸಲಾಗುತ್ತದೆ.ಹೆಚ್ಚನ ವಿವರಗಳಿಗೆ ಸಂಪರ್ಕಿಸಬೇಕಾದ ವಿಳಾಸ: ಪ್ರಾಚಾರ್ಯರುಎಂ .ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜು. ಸಿರಿಗೆರೆ 57754, ಚಿತ್ರದುರ್ಗ ಜಿಲ್ಲೆ. 9449981283, 9663956275, 9448860886, 7026753996 ಸಂಪರ್ಕಿಸಿ.



