Connect with us

Dvgsuddi Kannada | online news portal | Kannada news online

15 ಸಾವಿರ ಶಿಕ್ಷಕರ ನೇಮಕಾತಿ ಸಿಇಟಿ ಫಲಿತಾಂಶ ಜುಲೈ ಕೊನೆಯ ವಾರ ಪ್ರಕಟ: ಶಿಕ್ಷಣ ಸಚಿವ ನಾಗೇಶ್

ಪ್ರಮುಖ ಸುದ್ದಿ

15 ಸಾವಿರ ಶಿಕ್ಷಕರ ನೇಮಕಾತಿ ಸಿಇಟಿ ಫಲಿತಾಂಶ ಜುಲೈ ಕೊನೆಯ ವಾರ ಪ್ರಕಟ: ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು: 15 ಸಾವಿರ  ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಣ ಇಲಾಖೆ  ಸಿಇಟಿ  ಪರೀಕ್ಷೆ  ನಡೆಸಿತ್ತು. ಇದೀಗ  ಸಿಇಟಿ  ಪರೀಕ್ಷೆ ಫಲಿತಾಂಶ  ಜುಲೈ ಕೊನೆಯಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

ಸಿಇಟಿ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ನಡೆಯುತ್ತಿದೆ ಎರಡು ಪತ್ರಿಕೆಯ ಮೌಲ್ಯ ಮಾಪನ ಮುಗಿದಿದೆ. ಸ್ಕಾನ್ ಮಾಡಿ ಮೌಲ್ಯಮಾಪನ ಮಾಡಲಾಗುತ್ತಿದ್ದು ಜುಲೈ ಕೊನೆಯ ವೇಳೆಗೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಕಟ್ ಆಫ್ ಪರ್ಸೆಂಜೇಜ್ ಮತ್ತು ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಮತ್ತು ಮೇ22 ನಡೆದಿದೆ. ಪರೀಕ್ಷೆಗೆ 106083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಈ ಪೈಕಿ ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿದ್ದವರು 31967 ಅಭ್ಯರ್ಥಿಗಳು. ಶಿಕ್ಷಕ ಹುದ್ದೆಗೆ ಅರ್ಜಿಗಳ ಪರಿಗಣನೆ ಆಗಿರುವುದು 74116 ಮಂದಿ ಅಭ್ಯರ್ಥಿಗಳದ್ದು. ಪರೀಕ್ಷೆಗೆ ಹಾಜರಾದವರ ಸಂಖ್ಯೆ 69159 ಅಭ್ಯರ್ಥಿಗಳು. ಪರೀಕ್ಷೆಗೆ ಗೈರು ಹಾಜರಾದವರು 4957 ಅಭ್ಯರ್ಥಿಗಳು ಅಂದರೆ 93% ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,  7% ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

 

 

 

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top